HomeKarnatakaಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ

ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಗೆ ನೋಂದಣಿ ಅವಧಿ ವಿಸ್ತರಿಸಲಾಗಿದೆ. ಹಾಜರಾತಿ ಕೊರತೆ ಕಾರಣ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲಾಗಿದ್ದು, ಹೆಸರು ನೋಂದಣಿಗೆ ಮೇ 29ರಂದು ಸಂಜೆ 5:30ರ ವರೆಗೆ ಅವಕಾಶ ನೀಡಲಾಗಿದೆ.

2022 -23ನೇ ಸಾಲಿನ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡಿದ್ದ 26,500 ವಿದ್ಯಾರ್ಥಿಗಳಿಗೆ ಹಾಜರಾತಿ ಕೊರತೆಯ ಕಾರಣದಿಂದಾಗಿ ಮುಖ್ಯ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಖಾಸಗಿ ವಿದ್ಯಾರ್ಥಿಗಳಾಗಿ ಇವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದು, ಹೆಸರು ನೋಂದಣಿಗೆ ಮೇ 26ರ ವರೆಗೆ ಅವಕಾಶ ನೀಡಲಾಗಿತ್ತು. ಈಗ ವಿದ್ಯಾರ್ಥಿಗಳು ಹಾಗೂ ಪೋಷಕರ ಮನವಿಯ ಮೇರೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೇ 29ರಂದು ಸಂಜೆವರೆಗೆ ನೋಂದಣಿ ಅವಧಿ ವಿಸ್ತರಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular