HomeKarnatakaBIG NEWS: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ್ರಾ ಬಿ.ಕೆ. ಹರಿಪ್ರಸಾದ್?

BIG NEWS: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಅಸಮಾಧಾನ ಸ್ಫೋಟ; ರಾಜೀನಾಮೆಗೆ ಮುಂದಾದ್ರಾ ಬಿ.ಕೆ. ಹರಿಪ್ರಸಾದ್?

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕೆಲ ಸಚಿವಾಕಾಂಕ್ಷಿಗಳಿಗೆ ಮಂತ್ರಿ ಸ್ಥಾನ ಕೈತಪ್ಪಿದ್ದು, ಅಸಮಾಧಾನ ಭುಗಿಲೆದ್ದಿದೆ. ಪ್ರಮುಖವಾಗಿ ಪರಿಷತ್ ವಿಪಕ್ಷ ನಾಯಕರಾಗಿದ್ದ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ವರಿಷ್ಠರ ವಿರುದ್ಧ ತೀವ್ರವಾಗಿ ಮುನಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ರಾಜೀನಾಮೆಗೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವ ಸ್ಥಾನ ಕೈತಪ್ಪಿದ ಹಲವು ಹಿರಿಯ ಶಾಸಕರು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನೊಂದೆಡೆ ಇಂದು ಬೆಳಿಗ್ಗೆ 11:45ಕ್ಕೆ 24 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದು, ಪ್ರಮಾಣವಚನಕ್ಕೆ ರಾಜಭವನದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular