HomeKarnatakaBIG NEWS: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಶಾಸಕರು

BIG NEWS: ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 24 ಶಾಸಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, 24 ನೂತನ ಸಚಿವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ನೂತನ ಸಚಿವರಾಗಿ ಹೆಚ್.ಕೆ. ಪಾಟೀಲ್, ಕೃಷ್ಣಬೈರೇಗೌಡ, ಚಲುವರಾಯಸ್ವಾಮಿ, ಪಿರಿಯಾಪಟ್ಟಣ ವೆಂಕಟೇಶ್, ಡಾ.ಹೆಚ್.ಸಿ.ಮಹದೇವಪ್ಪ, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಶಿವಾನಂದಪಾಟೀಲ್, ಡಾ.ಶರಣಪ್ರಕಾಶ್ ಪಾಟೀಲ್, ಮಂಕಾಳು ವೈದ್ಯ, ಲಕ್ಷ್ಮೀ ಹೆಬ್ಬಾಳ್ಕರ್, ಬೋಸರಾಜು ಸೇರಿದಂತೆ 24 ಸಚಿವರು ಪ್ರಮಾಣವಚನ ಸ್ವೀಕರಿಸಿದರು.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಕಾಂಗ್ರೆಸ್ ಶಾಸಕರು, ನೂತನ ಸಚಿವರ ಕುಟುಂಬ ಸದಸ್ಯರು, ನಟ ಶಿವರಾಜ್ ಕುಮಾರ್, ಗೀತಾ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಮಾಣವಚನ ಸ್ವೀಕರಿಸಿದ ನೂತನ ಸಚಿವರ ಪಟ್ಟಿ:

ಹೆಚ್.ಕೆ.ಪಾಟೀಲ್
ಕೃಷ್ಣಬೈರೇಗೌಡ
ಚಲುವರಾಯಸ್ವಾಮಿ
ಪಿರಿಯಾಪಟ್ಟಣ ವೆಂಕಟೇಶ್
ಡಾ.ಹೆಚ್.ಸಿ.ಮಹದೇವಪ್ಪ
ಈಶ್ವರ ಖಂಡ್ರೆ
ಕೆ.ಎನ್.ರಾಜಣ್ಣ
ದಿನೇಶ್ ಗುಂಡೂರಾವ್
ಶರಣಬಸಪ್ಪ ದರ್ಶನಾಪೂರ
ಶಿವಾನಂದಪಾಟೀಲ್
ಆರ್.ಬಿ.ತಿಮ್ಮಾಪುರ
ಎಸ್.ಎಸ್.ಮಲ್ಲಿಕಾರ್ಜುನ
ಶಿವರಾಜ್ ತಂಗಡಗಿ
ಡಾ.ಶರಣಪ್ರಕಾಶ್ ಪಾಟೀಲ್
ಮಂಕಾಳು ವೈದ್ಯ
ಲಕ್ಷ್ಮೀ ಹೆಬ್ಬಾಳ್ಕರ್
ರಹಿಂ ಖಾನ್
ಡಿ.ಸುಧಾಕರ್
ಸಂತೋಷ್ ಲಾಡ್
ಬೋಸರಾಜು
ಬಿ.ಎಸ್.ಸುರೇಶ್
ಮಧು ಬಂಗಾರಪ್ಪ
ಎಂ.ಸಿ.ಸುಧಾಕರ್
ಬಿ.ನಾಗೇಂದ್ರ.

 

For Latest News Updates, Join Our Whatsapp Community🚩
RELATED ARTICLES

Most Popular