HomeKarnatakaBIG NEWS: ಶಾಸಕರೂ ಅಲ್ಲ, ಪರಿಷತ್ ಸದಸ್ಯರೂ ಅಲ್ಲ; ಆದರೂ ಬೋಸರಾಜುಗೆ ಮಂತ್ರಿ ಸ್ಥಾನ

BIG NEWS: ಶಾಸಕರೂ ಅಲ್ಲ, ಪರಿಷತ್ ಸದಸ್ಯರೂ ಅಲ್ಲ; ಆದರೂ ಬೋಸರಾಜುಗೆ ಮಂತ್ರಿ ಸ್ಥಾನ

ಬೆಂಗಳೂರು: ಶಾಸಕರಾಗಿ ಆಯ್ಕೆಯಾಗದಿದ್ದರೂ, ಪರಿಷತ್ ಸದಸ್ಯರಲ್ಲದಿದ್ದರೂ ಕಾಂಗ್ರೆಸ್ ಹೈಕಮಾಂಡ್ ಸಚಿವ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದು, ಬೋಸರಾಜು ಅವರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗದಿದ್ದರೂ ಹೈಕಮಾಂಡ್ ಜೊತೆ ಒಳ್ಳೆಯ ಸಂಪರ್ಕ ಹೊಂದಿದ್ದ ಹಾಗೂ ರಾಯಚೂರು ಜಿಲ್ಲೆಯಲ್ಲಿ ನಾಲ್ಕು ಕಡೆ ಕಾಂಗ್ರೆಸ್ ಗೆಲುವಿಗೆ ಕಾರಣರಾಗಿದ್ದ ಬೋಸರಾಜು ಅವರಿಗೆ ಸಚಿವ ಸ್ಥಾನ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಯಚೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಬೋಸರಾಜು ಅವರಿಗೆ ಟಿಕೆಟ್ ನೀಡಿರಲಿಲ್ಲ. ಅಲ್ಲಿ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಫೈನಲ್ ಆಗಿತ್ತು. ಈ ವೇಳೆ ಟಿಕೆಟ್ ಬಿಟ್ಟುಕೊಡುವಂತೆ ಸಂಧಾನ ಸಭೆ ನಡೆಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದರೆ ಹುದ್ದೆ ನೀಡುವುದಾಗಿ ಖುದ್ದು ರಾಹುಲ್ ಗಾಂಧಿ ಬೋಸರಾಜು ಅವರಿಗೆ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಬೋಸರಾಜು ಅವರಿಗೆ ಸಚಿವ ಸ್ಥಾನ ನಿಡಲಾಗಿದ್ದು, ನೂತನ ಸಚಿವರಾಗಿ ಪ್ರಮಣವಚನ ಸ್ವೀಕರಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular