
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಿಲ್ಲ, ಎರಡು, ಮೂರು, ಆರು ಬಾರಿ ಶಾಸಕರಾದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಹೇಳಿದರು.
ಮುಂದಿನ ವಾರ ಅಂದರೆ ಜೂನ್ ನಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ 5 ಗ್ಯಾರಂಟಿ ಯೊಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿದರು.

