ನವದೆಹಲಿ: ಪೆಟ್ರೋಲ್ ಪಂಪ್ ಉದ್ಯೋಗಿ 2000 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದು, ವ್ಯಕ್ತಿ ಪೊಲೀಸ್ ದೂರು ದಾಖಲಿಸಿದ್ದಾರೆ.
ರಾಷ್ಟ್ರ ರಾಜಧಾನಿಯ ಸೌತ್ ಎಕ್ಸ್‌ಟೆ ನ್ಶನ್ ಪಾರ್ಟ್-1 ನಲ್ಲಿರುವ ಪೆಟ್ರೋಲ್ ಪಂಪ್ ನ ನೌಕರನ ವಿರುದ್ಧ 2,000 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ ನಂತರ ವ್ಯಕ್ತಿಯೊಬ್ಬರು ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಸ್ಕೂಟರ್‌ಗೆ ಪೆಟ್ರೋಲ್ ತುಂಬಿಸಲು ಸೌತ್ ಎಕ್ಸ್ ಟೆನ್ಶನ್ ಭಾಗ-1ರ ಪೆಟ್ರೋಲ್ ಪಂಪ್‌ಗೆ ಹೋಗಿದ್ದಾಗಿ ದೂರುದಾರರು ತಿಳಿಸಿದ್ದಾರೆ. 400 ರೂ. ಬಿಲ್‌ಗೆ 2000 ರೂ. ನೋಟು ನೀಡಿದರು, ಆದರೆ ಪೆಟ್ರೋಲ್ ಪಂಪ್ ಅಟೆಂಡರ್ ನೋಟು ತೆಗೆದುಕೊಳ್ಳಲು ನಿರಾಕರಿಸಿದರು. ಈ ಸಂಬಂಧ ಶುಕ್ರವಾರ ಕೋಟ್ಲಾ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ನಾವು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ.
ಮೇ 19 ರಂದು ಭಾರತೀಯ ರಿಸರ್ವ್ ಬ್ಯಾಂಕ್(RBI) ಚಲಾವಣೆಯಲ್ಲಿರುವ 2,000 ರೂಪಾಯಿ ನೋಟುಗಳನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ಸಾರ್ವಜನಿಕರಿಗೆ ಅಂತಹ ನೋಟುಗಳನ್ನು ಖಾತೆಗಳಲ್ಲಿ ಜಮಾ ಮಾಡಲು ಅಥವಾ ಬ್ಯಾಂಕ್‌ಗಳಲ್ಲಿ ವಿನಿಮಯ ಮಾಡಿಕೊಳ್ಳಲು ಸೆಪ್ಟೆಂಬರ್ 30 ರವರೆಗೆ ಸಮಯ ನೀಡಿದೆ.