ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಪರಾಭವಗೊಂಡ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.
ಸಾಹಿತಿಗಳು, ಮಲೆನಾಡು ಒಕ್ಕೂಟದಿಂದ ಒತ್ತಾಯ ಕೇಳಿ ಬಂದಿದ್ದು, ಶೀಘ್ರವೇ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಭೇಟಿಗೆ ನಿರ್ಧಾರ ಕೈಗೊಳ್ಳಲಾಗಿದೆ.
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸಜ್ಜನ ರಾಜಕಾರಣಿಯಾಗಿದ್ದಾರೆ. ಅವರು ಸೋಲಿನಿಂದ ಕಂಗೆಟ್ಟು ಕೂರುವುದಕ್ಕೆ ಪಕ್ಷ ಬಿಡಬಾರದು. ಅವರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಿ ಆಕ್ಟಿವ್ ಆಗಿ ಇರುವಂತೆ ನೋಡಿಕೊಳ್ಳಬೇಕಿದೆ ಎಂದು ಸಿದ್ದರಾಮಯ್ಯ ಅವರಿಗೆ ಒತ್ತಡ ಹಾಕಲು ದೇವನೂರ ಮಹಾದೇವ ಸೇರಿದಂತೆ ಹಿರಿಯ ಸಾಹಿತಿಗಳು ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.