BREAKING NEWS: ಪ್ರವೀಣ್‌ ನೆಟ್ಟಾರು ಪತ್ನಿಗೆ ಮರು ನೇಮಕ ಮಾಡಲು ಸಿಎಂ ಸಿದ್ದರಾಮಯ್ಯ ‌ʼಗ್ರೀನ್‌ ಸಿಗ್ನಲ್ʼ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಈ ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಮಾಡಿದ್ದ ನೇಮಕಾತಿಗಳು ಸಹಜವಾಗಿ ರದ್ದಾಗಿದ್ದವು.

ಈ ಪೈಕಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಹಿಂದೂ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿ ನೂತನ್‌ ಕುಮಾರಿ ಅವರ ಉದ್ಯೋಗಕ್ಕೂ ಕುತ್ತು ಬಂದಿತ್ತು. ಆದರೆ ಈ ವಿಷಯವನ್ನುರಾಜಕೀಯವಾಗಿ ಬಳಸಿಕೊಳ್ಳಲು ಮುಂದಾದ ಬಿಜೆಪಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿತ್ತು.

ಆದರೆ ಯಾವುದೇ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನಡೆಯುವ ಸಹಜ ಪ್ರಕ್ರಿಯೆಯನ್ನು ಬಿಜೆಪಿ ಮರೆಮಾಚಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ನಿಜವಾಗಿಯೂ ಪ್ರವೀಣ್‌ ನೆಟ್ಟಾರು ಕುಟುಂಬದ ಬಗ್ಗೆ ಕಾಳಜಿ ಇದ್ದರೆ ತಾತ್ಕಾಲಿಕ ನೌಕರಿ ಕೊಟ್ಟಿದ್ದೇಕೆ ಎಂಬ ಪ್ರಶ್ನೆ ಸ್ವತಃ  ಹಿಂದೂ ಪರ ಕಾರ್ಯಕರ್ತರಿಂದಲೇ ಕೇಳಿ ಬಂದಿತ್ತು.

ಇದೀಗ ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದು, “ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರುನೇಮಕ ಮಾಡಲಾಗುವುದು” ಎಂದು ಹೇಳಿದ್ದಾರೆ.

https://twitter.com/siddaramaiah/status/1662478876453502976

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read