ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಇತ್ತೀಚೆಗೆ ನಡೆಸಿದ ಸಿಇಟಿ ಪರೀಕ್ಷೆಯ ತಾತ್ಕಾಲಿಕ ಉತ್ತರಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಣಿತ ವಿಷಯದ ತಾತ್ಕಾಲಿಕ ಸರಿ ಉತ್ತರಗಳನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಉತ್ತರ ಪರಿಶೀಲಿಸಬಹುದಾಗಿದ್ದು, ತಾತ್ಕಾಲಿಕ ಸರಿ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಮೇ 30ರ ಬೆಳಗ್ಗೆ 11 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆಕ್ಷೇಪಣೆಗಳನ್ನು ಆಧಾರ ಸಹಿತವಾಗಿ ಸಲ್ಲಿಸಬೇಕು. ವಿಷಯ ತಜ್ಞರು ಆಕ್ಷೇಪಣೆಗಳ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.