HomeKarnatakaಕಿರಿಯರಿಗೆ ಪ್ರಮುಖ ಖಾತೆ, ನನಗೆ ಸಚಿವ ಸ್ಥಾನವೇ ಬೇಡ: ಡಿಸಿಎಂ ಡಿಕೆಶಿ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ

ಕಿರಿಯರಿಗೆ ಪ್ರಮುಖ ಖಾತೆ, ನನಗೆ ಸಚಿವ ಸ್ಥಾನವೇ ಬೇಡ: ಡಿಸಿಎಂ ಡಿಕೆಶಿ ಮನವೊಲಿಕೆಗೂ ಬಗ್ಗದ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಇಲಾಖೆ ನೀಡಿರುವುದಕ್ಕೆ ತೀವ್ರ ಅಸಮಾಧಾನಗೊಂಡಿರುವ ನೂತನ ಸಚಿವ ರಾಮಲಿಂಗಾರೆಡ್ಡಿ ಅವರು ಸಾರಿಗೆ ಇಲಾಖೆ ನೀಡುವುದಾದರೆ ಸಚಿವ ಸ್ಥಾನವೇ ಬೇಡ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಬೆಳಗ್ಗೆ 11 ಗಂಟೆಯಿಂದಲೂ ಸಂಸದ ಡಿ.ಕೆ. ಸುರೇಶ್ ಹಾಗೂ ನಂತರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರ ಮನವೊಲಿಸಲು ಪ್ರಯತ್ನ ನಡೆಸಿದ್ದಾರೆ. ಮುಖ್ಯಮಂತ್ರಿ ಬಿಟ್ಟರೆ ಕ್ಯಾಬಿನೆಟ್ ನಲ್ಲಿರುವ ಹಿರಿಯ ಸಚಿವ ನಾನಾಗಿದ್ದಾನೆ. ನನಗೆ ಸಾರಿಗೆ ಇಲಾಖೆಯಂತಹ ಸಣ್ಣ ಖಾತೆ ಬೇಡ. ಕಂದಾಯ ಇಲಾಖೆಯಂತಹ ಪ್ರಮುಖ ಖಾತೆ ನೀಡಬಹುದಿತ್ತು ಎಂದು ಹೇಳದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದೆ ನಾಲ್ಕೂವರೆ ವರ್ಷ ಸಾರಿಗೆ ಇಲಾಖೆ ನಿಭಾಯಿಸುತ್ತೇನೆ. ತನಗಿಂತ ಕಿರಿಯರಿಗೆ ಪ್ರಮುಖ ಖಾತೆ ನೀಡಲಾಗಿದೆ. ನನಗೆ ಅವಮಾನ ಆಗಿದೆ. ಅವಮಾನದಲ್ಲಿ ಮುನ್ನಡೆಯುವುದಕ್ಕಿಂತ ಸಚಿವ ಸ್ಥಾನವೇ ನನಗೆ ಬೇಡ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅವರ ಮನವೊರಿಸಲು ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಪ್ರಯತ್ನ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular