HomeKarnatakaಆಡಳಿತ ಯಂತ್ರಕ್ಕೆ ಚುರುಕು: ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ ಸಿದ್ಧರಾಮಯ್ಯ

ಆಡಳಿತ ಯಂತ್ರಕ್ಕೆ ಚುರುಕು: ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಆಡಳಿತ ಯಂತ್ರಕ್ಕೆ ಚುರುಕು ನೀಡಲು ಮುಂದಾದ ಸಿಎಂ ಸಿದ್ದರಾಮಯ್ಯ ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಅಧಿಕಾರಿಗಳ ಮೇಲೆ ನಿಗಾ ವಹಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಲೋಕಸಭೆ ಚುನಾವಣೆಯಲ್ಲಿ ನಾವು ಕನಿಷ್ಠ 20 ಸ್ಥಾನ ಗೆಲ್ಲಬೇಕು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನೀಡಬೇಕಿರುವ ಜವಾಬ್ದಾರಿ ನಮ್ಮ ಮೇಲಿದೆ. ಕ್ಷೇತ್ರದಲ್ಲಿಯೇ ಸಮಸ್ಯೆ ಬಗೆಹರಿಸಲು ಕ್ರಿಯಾಶೀಲತೆ ರೂಢಿಸಿಕೊಳ್ಳಿ. ಸಣ್ಣಪುಟ್ಟ ಕೆಲಸಕ್ಕೆ ಜನ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ. ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪಲು ಶ್ರಮಿಸಬೇಕು. ಸದ್ಯದಲ್ಲೇ ಖಾತೆ ಹಂಚಿಕೆ ಪೂರ್ಣಗೊಳ್ಳಲಿದ್ದು, ನೀವೆಲ್ಲ ಸಕ್ರಿಯರಾಗಿ ಕಾರ್ಯನಿರ್ವಹಿಸಿ. ಉಸ್ತುವಾರಿ ವಹಿಸುವ ಜಿಲ್ಲೆಗಳಿಗೆ ಹೆಚ್ಚು ಪ್ರವಾಸ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಜಿಲ್ಲೆ, ತಾಲೂಕು ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಎಲ್ಲಾ ಸಚಿವರಿಗೂ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular