ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ಸರ್ಕಾರದ ಎಲ್ಲಾ ಖಾಲಿ ಹುದ್ದೆಗಳ ಭರ್ತಿ ಶೀಘ್ರ: ಡಿಸಿಎಂ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ಖಾಲಿ ಹುದ್ದೆಗಳನ್ನು ಆದಷ್ಟು ಬೇಗನೆ ಭರ್ತಿ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡುವುದಾಗಿ ಜನರಿಗೆ ಮಾತು ನೀಡಿದ್ದೇವೆ. ಕೊಟ್ಟ ಮಾತಿನಂತೆ ಆದಷ್ಟು ಬೇಗನೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಅರ್ಹರನ್ನು ಪಾರದರ್ಶಕವಾಗಿ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆದಿದೆ. ನೇಮಕಾತಿ ಹಗರಣಗಳಿಂದ ನೊಂದ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುತ್ತೇವೆ. ಅರ್ಹರನ್ನು ಪಾರದರ್ಶಕವಾಗಿ ನೇಮಕ ಮಾಡಿಕೊಂಡು ನಿರುದ್ಯೋಗ ಸಮಸ್ಯೆ ನಿವಾರಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಶೀಘ್ರವೇ ಸರ್ಕಾರದ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅರ್ಹರನ್ನು ಗುರುತಿಸಿ ಪ್ರಾಮಾಣಿಕವಾಗಿ ಆಯ್ಕೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read