HomeKarnatakaBIG NEWS: ʼಗ್ಯಾರಂಟಿʼ ಜಾರಿಗೆ ಸರ್ಕಾರದ ಸಿದ್ದತೆ; ಅಧಿಕಾರಿಗಳೊಂದಿಗೆ ಸಿಎಂ ಸಭೆ

BIG NEWS: ʼಗ್ಯಾರಂಟಿʼ ಜಾರಿಗೆ ಸರ್ಕಾರದ ಸಿದ್ದತೆ; ಅಧಿಕಾರಿಗಳೊಂದಿಗೆ ಸಿಎಂ ಸಭೆ

ಕಾಂಗ್ರೆಸ್ ಗ್ಯಾರಂಟಿ ಜಾರಿಗೆ ಒತ್ತಡ ಹೆಚ್ಚಾಗುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ 5 ಇಲಾಖೆಯ ಅಧಿಕಾರಿಗಳ ಜೊತೆ ಸಭೆ ಮಾಡಿ ಚರ್ಚಿಸಿದ್ದಾರೆ.

ಬೆಂಗಳೂರಿನ ಶಕ್ತಿಭವನದಲ್ಲಿ ಜರುಗಿದ ಸಭೆಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿ ಜಾರಿಗೆ ಸಾರಿಗೆ ಇಲಾಖೆಯೊಂದಿಗೆ, ಮನೆಯೊಡತಿಗೆ 2 ಸಾವಿರ ರೂಪಾಯಿ ಧನಸಹಾಯ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕುಟುಂಬದ ಪ್ರತಿ ಸದಸ್ಯರಿಗೆ 10 ಕೆ.ಜಿ ಉಚಿತ ಅಕ್ಕಿ ಗ್ಯಾರಂಟಿ ಜಾರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ನಿರುದ್ಯೋಗ ಯುವಕರಿಗೆ ಆರ್ಥಿಕ ಸಹಾಯ ನೀಡುವ ಯುವನಿಧಿ ಗ್ಯಾರಂಟಿ ಜಾರಿಗೆ ಕೌಶಲ್ಯಾಭಿವೃದ್ಧಿ ಇಲಾಖೆ, ಗೃಹಜ್ಯೋತಿ ಗ್ಯಾರಂಟಿಯಡಿ 200 ಯುನಿಟ್ ಉಚಿತ ವಿದ್ಯುತ್ ನೀಡುವ ಸಲುವಾಗಿ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಭೆ ಮಾಡಿ ಚರ್ಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದಿನ ಸಂಪುಟ ಸಭೆಯಲ್ಲಿ ಗ್ಯಾರಂಟಿ ಜಾರಿ ಬಗ್ಗೆ ಸ್ಪಷ್ಟ ನಿರ್ಧಾರ ಹಾಗು ಷರತ್ತುಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಜೂನ್ 1 ರಂದು ಮುಂದಿನ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಜೂನ್ 1 ರಿಂದ ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದು, ಈ ಸಭೆ ಮಹತ್ವ ಪಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular