HomeKarnatakaಶುಭ ಸುದ್ದಿ: ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶುಭ ಸುದ್ದಿ: ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ತುಮಕೂರು ಸಹಕಾರ ಹಾಲು ಉತ್ಪಾದಕರ ಒಕ್ಕೂಟದಲ್ಲಿ ಖಾಲಿ ಇರುವ ವಿವಿಧ ವೃಂದಗಳ 29 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಹಾಯಕ ವ್ಯವಸ್ಥಾಪಕ, ಸಹಾಯಕ ವ್ಯವಸ್ಥಾಪಕ ಇಂಜಿನಿಯರ್, ಸಹಾಯಕ ವ್ಯವಸ್ಥಾಪಕ ಎಫ್ ಅಂಡ್ ಎಫ್, ವೈದ್ಯಾಧಿಕಾರಿ ಆಡಳಿತ ಅಧಿಕಾರಿ, ಉಗ್ರಾಣಾಧಿಕಾರಿ ಸೇರಿದಂತೆ 34 ವೃಂದದ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿಂದಿನ ಸುತ್ತೋಲೆಯಲ್ಲಿ ಕೆಲವು ತಿದ್ದುಪಡಿ ಮಾಡಿ ಹೊಸ ಸುತ್ತೋಲೆ ಹೊರಡಿಸಲಾಗಿದೆ. ಜೂನ್ 6 ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಪರಿಶಿಷ್ಟ ಜಾತಿ, ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 500 ರೂಪಾಯಿ, ಇತರರಿಗೆ 1000 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಹುದ್ದೆಗಳು ವಿದ್ಯಾರ್ಹತೆ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ https://www.tumul.coop ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular