ಬೆಂಗಳೂರು: ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಉನ್ನತ ಸ್ಥಾನಮಾನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉಭಯ ನಾಯಕರನ್ನು ಭೇಟಿಯಾಗಲಿದ್ದಾರೆ.
ಬೆಳಗಾವಿಯಲ್ಲಿ ನಾಳೆ ಲಕ್ಷ್ಮಣ ಸವದಿಯವರನ್ನು ಭೇಟಿಯಾಗಲಿರುವ ಡಿ.ಕೆ. ಶಿವಕುಮಾರ್ ನಂತರ ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ನಾಯಕರ ಮನೆಗೆ ಡಿಕೆಶಿ ಭೇಟಿ ನೀಡಲಿದ್ದು, ಸಮಾಲೋಚನೆ ನಡೆಸಿದ್ದಾರೆ.