ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಇಟ್ಟಿಗೆ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾರೆ. ಜಾರ್ಖಂಡ್ ಮೂಲದ ಪಂಕಜ್ ಕುಮಾರ್ ಯಾದವ್(35) ಮೃತಪಟ್ಟವರು ಎಂದು ಹೇಳಲಾಗಿದೆ.
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮರಸೂರು ಗೇಟ್ ಬಳಿ ಘಟನೆ ನಡೆದಿದೆ. ಕ್ರೇನ್ ಮೂಲಕ ಆರನೇ ಅಂತಸ್ತಿಗೆ ಸಿಮೆಂಟ್ ಇಟ್ಟಿಗೆ ಸಾಗಿಸುವಾಗ ಕ್ರೇನ್ ತಂತಿ ತುಂಡಾಗಿ ಕಾರ್ಮಿಕ ಪಂಕಜ್ ಕುಮಾರ್ ಮೇಲೆ ಇಟ್ಟಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.