HomeBusinessರೈತರು, ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ಕೃಷಿ ಉತ್ಪನ್ನ ಮಾರಾಟಕ್ಕೆ ‘ಅಮೃತ...

ರೈತರು, ಗ್ರಾಹಕರಿಗೆ ಸಿಹಿ ಸುದ್ದಿ: ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ಕೃಷಿ ಉತ್ಪನ್ನ ಮಾರಾಟಕ್ಕೆ ‘ಅಮೃತ ಮಳಿಗೆ’

ಬೆಂಗಳೂರು: ಕೃಷಿ ಉತ್ಪನ್ನಗಳ ಮಾರಾಟಕ್ಕೆ ನಂದಿನಿ ಹಾಲಿನ ಕೇಂದ್ರಗಳ ಪಕ್ಕದಲ್ಲೇ ರೈತರ ಉತ್ಪನ್ನಗಳನ್ನು ನೇರವಾಗಿ ಮಾರಾಟ ಮಾಡಲು ‘ಅಮೃತ ಮಳಿಗೆ’ಗಳನ್ನು ಆರಂಭಿಸಲಾಗುವುದು.

ಕೃಷಿ ಉತ್ಪನ್ನಗಳ ಮಾರಾಟಕ್ಕೆ ಪ್ರೋತ್ಸಾಹ ಮತ್ತು ಸೂಕ್ತ ಮಾರುಕಟ್ಟೆ, ಕಲ್ಪಿಸುವ ಉದ್ದೇಶದಿಂದ ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಕೃಷಿ ಇಲಾಖೆ ಜಂಟಿಯಾಗಿ ರಾಜ್ಯದ 18 ಕಡೆ ನಂದಿನಿ ಹಾಲಿನ ಕೇಂದ್ರಗಳ ಬಳಿ ಅಮೃತ ಮಳಿಗೆಗಳನ್ನು ಆರಂಭಿಸಲಾಗುವುದು ಎಂದು ಕೃಷಿ ಸಚಿವ ಚೆಲುವರಾಯ ಸ್ವಾಮಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರಂಭಿಕವಾಗಿ 18 ಕಡೆ ಅಮೃತ ಮಳಿಗೆಗಳನ್ನು ಆರಂಭಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗುತ್ತದೆ. ಕೃಷಿ ಉತ್ಪನ್ನಗಳು ನೇರವಾಗಿ ಗ್ರಾಹಕರಿಗೆ ಸಿಗುತ್ತವೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular