ಉಡುಪಿ: ರಾಜ್ಯದಲ್ಲಿ ಸರಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆಯ ಬೆನ್ನಲ್ಲೇ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗದಲ್ಲಿ ಮಹಿಳೆಯರಿಗೆ ಅನ್ಯಾಯವಾಗಿದೆ ಎಂದು ಮಾಜಿ ಸಚಿವ, ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಆರೋಪಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಸುನೀಲ್ ಕುಮಾರ್ ಈ ಪ್ರದೇಶಗಳಲ್ಲಿ ಖಾಸಗಿ ಬಸ್‌ಗಳ ಬಗ್ಗೆ ಎತ್ತಿ ತೋರಿಸಿದ್ದಾರೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳ ಬಹುತೇಕ ಭಾಗಗಳಿಗೆ ಖಾಸಗಿ ಬಸ್ ಗಳ ಮೂಲಕ ಸಾರಿಗೆ ಸಂಪರ್ಕ ಲಭ್ಯವಿದೆ. ಇಲ್ಲಿ ಸರ್ಕಾರಿ ಬಸ್ ಸೇವೆ ಲಭ್ಯವಿಲ್ಲ. ಆದರೆ, ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಸೇವೆಯನ್ನು ಸರ್ಕಾರಿ ಸಾರಿಗೆ ಸಂಸ್ಥೆಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿದೆ ಎಂದು ಅವರು ಬರೆದಿದ್ದಾರೆ.
ಇದು ರಾಜ್ಯದ ಈ ಭಾಗಗಳ ಜನರಿಗೆ ಅನ್ಯಾಯ ಎಂದು ಕರೆದ ಅವರು, ಈ ಮೂರು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯವನ್ನು ಸರ್ಕಾರ ಒದಗಿಸಬೇಕು ಎಂದು ಆಗ್ರಹಿಸಿದ್ರು.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ನೀಡಿತ್ತು. ಅದರಂತೆ ಇದೀಗ ಉಚಿತ ಬಸ್ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದು, ಶೀಘ್ರದಲ್ಲೇ ಜಾರಿಗೆ ಬರುವ ನಿರೀಕ್ಷೆಯಿದೆ.
https://twitter.com/karkalasunil/status/1663482540995522561
https://twitter.com/karkalasunil/status/1663482547270197250