HomeLatest NewsBIG NEWS: ಶೆಟ್ಟರ್ - ಸವದಿ ಬಂದಿದ್ದರಿಂದ ನಮಗೆ ಬಲ ಬಂದಿದೆ; ಡಿಸಿಎಂ ಡಿ.ಕೆ. ಶಿವಕುಮಾರ್...

BIG NEWS: ಶೆಟ್ಟರ್ – ಸವದಿ ಬಂದಿದ್ದರಿಂದ ನಮಗೆ ಬಲ ಬಂದಿದೆ; ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆ

ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಕಾರಣ ನಮಗೆ ಬಲ ಬಂದಿದೆ. ನಮ್ಮ ನೆರವಿಗೆ ಬಂದವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್, ಚುನಾವಣೆಗಳಲ್ಲಿ ಸೋಲು – ಗೆಲುವು ಇದ್ದದ್ದೇ. ಜಗದೀಶ್ ಶೆಟ್ಟರ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವ ಕುರಿತು ತೀರ್ಮಾನಿಸುತ್ತೇವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕಳೆದ ರಾತ್ರಿ ಆಂಧ್ರಪ್ರದೇಶದ ರಾಜಮಂಡ್ರಿಯಿಂದ ನೇರವಾಗಿ ಬೆಳಗಾವಿಗೆ ಬಂದಿದ್ದ ಡಿ.ಕೆ. ಶಿವಕುಮಾರ್, ಲಕ್ಷ್ಮಣ ಸವದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಹಾಜರಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular