
ವರದಿಗಳ ಪ್ರಕಾರ, ಎರಡು ದಿನಗಳ ನಂತರ ರಸ್ತೆ ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.
ರಾಜ್ಯದ ಅಲ್ಮೋರಾ, ಬಾಗೇಶ್ವರ್, ಚಮೋಲಿ, ಚಂಪಾವತ್, ಡೆಹ್ರಾಡೂನ್, ಗರ್ವಾಲ್, ಹರ್ದ್ವಾರ್, ನೈನಿತಾಲ್, ಪಿಥೋರಗಢ, ರುದ್ರಪ್ರಯಾಗ, ತೆಹ್ರಿ ಗರ್ವಾಲ್, ಉಧಮ್ ಸಿಂಗ್ ನಗರ ಮತ್ತು ಉತ್ತರಕಾಶಿ ಜಿಲ್ಲೆಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪೊಲೀಸರು ಕೂಡ ಸೂಚನೆ ನೀಡಿದ್ದು ಎಲ್ಲಾ ಯಾತ್ರಾರ್ಥಿಗಳಿಗೆ ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಸೂಚಿಸಿದ್ದಾರೆ.

