ಕರ್ನಾಟಕದ ಜನತೆಗೆ ಗುಡ್ ನ್ಯೂಸ್; ಜುಲೈ ಅಂತ್ಯದ ವೇಳೆಗೆ ಮತ್ತೊಂದು ‘ವಂದೇ ಭಾರತ್’ ರೈಲು

ಜುಲೈ ಅಂತ್ಯದೊಳಗೆ ಕರ್ನಾಟಕಕ್ಕೆ ಎರಡನೇ ವಂದೇ ಭಾರತ್ ರೈಲು ಸಿಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಿಸಿದ್ದಾರೆ. ಬೆಂಗಳೂರು-ಧಾರವಾಡ ನಡುವೆ 2ನೇ ರೈಲು ಸಂಚಾರ ಶುರುವಾಗಲಿದೆ.

ಪ್ರಲ್ಹಾದ್ ಜೋಶಿ ಅವರು ಬುಧವಾರ ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಧಾರವಾಡವನ್ನು ಸಂಪರ್ಕಿಸುವ ವಂದೇ ಭಾರತ್ ರೈಲಿನ ಬಗ್ಗೆ ಚರ್ಚಿಸಿದರು.

ಈ ವೇಳೆ “ವಂದೇ ಭಾರತ್ ರೈಲು ಓಡಿಸಲು ಸಿದ್ಧತೆಗಳು ಪೂರ್ಣಗೊಂಡಿವೆ. ಜುಲೈ ವೇಳೆಗೆ ರೈಲು ಸಂಚಾರ ಆರಂಭಿಸಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವರು ಭರವಸೆ ನೀಡಿದ್ದಾರೆ’ ಎಂದು ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ತಿಳಿಸಿದರು.

ಬೆಂಗಳೂರು ಮತ್ತು ಧಾರವಾಡ ನಡುವಿನ ವಂದೇ ಭಾರತ್ ರೈಲನ್ನು ಮಾರ್ಚ್ 2023 ರಲ್ಲಿ ಉದ್ಘಾಟಿಸಲು ನಿರ್ಧರಿಸಲಾಗಿತ್ತು. ಹಳಿಗಳ ವಿದ್ಯುದ್ದೀಕರಣ ಮತ್ತು ಟ್ರಾಕ್ಷನ್ ಸಬ್‌ಸ್ಟೇಷನ್‌ನಲ್ಲಿನ ವಿಳಂಬ ಮತ್ತು ಕರ್ನಾಟಕದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಸೇರಿದಂತೆ ಹಲವಾರು ಕಾರಣಗಳಿಂದ ಇದು ವಿಳಂಬವಾಗಿದೆ.

ಬೆಂಗಳೂರು ಧಾರವಾಡ ಮಾರ್ಗದ ರೈಲು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ರೈಲು ಆಗಲಿದೆ. ಈಗಾಗಲೇ ಮೊದಲ ವಂದೇ ಭಾರತ್ ರೈಲು ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲ ವಂದೇ ಭಾರತ್ ರೈಲು ಉದ್ಘಾಟಿಸಿದರು. ಮೈಸೂರು-ಬೆಂಗಳೂರು-ಚೆನ್ನೈ ಮಾರ್ಗದ ರೈಲು ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಆಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read