
ಈ ಸಭೆಯು ಕಳೆದ ತಿಂಗಳು ಆರಂಭಿಸಲಾದ ಕೇಜ್ರಿವಾಲ್ ಅವರ ರಾಷ್ಟ್ರವ್ಯಾಪಿ ಪ್ರವಾಸದ ಭಾಗವಾಗಿದೆ. ಇದು ಸುಗ್ರೀವಾಜ್ಞೆಗೆ ವಿರುದ್ಧವಾಗಿ ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಮತ್ತು ಸಂಸತ್ತಿನ ಮೇಲ್ಮನೆಯಲ್ಲಿ ಅದನ್ನು ಎತ್ತಿ ಹಿಡಿಯುವ ಗುರಿಯನ್ನು ಹೊಂದಿದೆ.
ಆಮ್ ಆದ್ಮಿ ಪಕ್ಷದ (ಎಎಪಿ) ನೇತೃತ್ವದ ಕೇಜ್ರಿವಾಲ್ ಪ್ರಸ್ತುತ ತಾವು ನಡೆಸುತ್ತಿರುವ ಹೋರಾಟ ಪ್ರಯತ್ನದ ಭಾಗವಾಗಿ ಜೂನ್ 2 ರಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು ಭೇಟಿಯಾಗಲಿದ್ದಾರೆ.
ಕೇಜ್ರಿವಾಲ್ ಈಗಾಗಲೇ ಮಮತಾ ಬ್ಯಾನರ್ಜಿ, ಶರದ್ ಪವಾರ್, ಉದ್ಧವ್ ಠಾಕ್ರೆ, ನಿತೀಶ್ ಕುಮಾರ್ , ತೇಜಸ್ವಿ ಯಾದವ್ ಸೇರಿದಂತೆ ಹಲವಾರು ಪ್ರಭಾವಿ ರಾಜಕೀಯ ವ್ಯಕ್ತಿಗಳನ್ನು ಭೇಟಿ ಮಾಡಿದ್ದಾರೆ.
ಮೇ 11 ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ದೆಹಲಿಯಲ್ಲಿ ಸೇವಾವಲಯದ ಮೇಲಿನ ಅಧಿಕಾರವನ್ನ ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸುವ ಆದೇಶದ ನಂತರ ಕೇಂದ್ರ ಸುಗ್ರೀವಾಜ್ಞೆ ಹೊರಡಿಸಿತು.

