HomeKarnatakaಯಾವುದೇ ಕಂಡೀಷನ್ ಇಲ್ಲದೇ `5 ಗ್ಯಾರಂಟಿ' ಯೋಜನೆ’ಗಳನ್ನು ಜಾರಿ ಮಾಡಬೇಕು: ಸಂಸದ ಪ್ರತಾಪ್ ಸಿಂಹ ಆಗ್ರಹ

ಯಾವುದೇ ಕಂಡೀಷನ್ ಇಲ್ಲದೇ `5 ಗ್ಯಾರಂಟಿ’ ಯೋಜನೆ’ಗಳನ್ನು ಜಾರಿ ಮಾಡಬೇಕು: ಸಂಸದ ಪ್ರತಾಪ್ ಸಿಂಹ ಆಗ್ರಹ

ಮೈಸೂರು: ಯಾವುದೇ ಷರತ್ತುಗಳಿಲ್ಲದೇ ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಕಾಂಗ್ರೆಸ್ ನವರು ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ನೀಡಲಾಗುವುದು ಎಂದು ಘೋಷಣೆ ಮಾಡಿತ್ತು. ಆದರೆ ಈಗ ಗ್ಯಾರಂಟಿಗಳಿಗೆ ಷರತ್ತುಗಳು ಅನ್ವಯ ಎಂದು ಹೇಳುತ್ತಿದ್ದಾರೆ. ಹೀಗಾಗಿ ಯಾವುದೇ ಕಂಡೀಷನ್ ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ನನಗೂ ಫ್ರೀ, ನಿನಗೂ ಫ್ರೀ, ಎಲ್ಲರಿಗೂ ಫ್ರೀ ಅಂತಾ ಹೇಳಿದ್ರು, ನುಡಿದಂತೆ ಎಲ್ಲರಿಗೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಒತ್ತಡ ನಿಭಾಯಿಸಿಕೊಂಡು ಪ್ರತಿಯೊಬ್ಬರಿಗೂ ಷರತ್ತುಗಳಿಲ್ಲದೇ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular