ನವದೆಹಲಿ: ಕಾಂಗ್ರೆಸ್ ಘೋಷಣೆ ಮಾಡಿರುವ ಯೋಜನೆಗಳನ್ನು ಸ್ವಾಗತಿಸುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಿರುವುದನ್ನು ಸ್ವಾಗತಿಸುತ್ತೇನೆ. ಯೋಜನೆಯನ್ನು ಸರಿಯಾಗಿ ಅನುಷ್ಠಾನಕ್ಕೆ ತರುವ ಕೆಲಸ ಆಗಲಿ. ಪ್ರಣಾಳಿಕೆಯಲ್ಲಿ ಮುದ್ರಿಸಿರುವಂತೆ ಪ್ರತಿ ವ್ಯಕ್ತಿ ಎಂದು ಹೇಳಿದ್ದರು. ಈಗ ಘೋಷಣೆಯ ವೇಳೆ ಕುಟುಂಬಕ್ಕೆ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ರಾಜ್ಯದ ಆರ್ಥಿಕ ಸ್ಥಿತಿ ಗತಿಗೆ ಸಂಬಂಧಿಸಿದಂತೆ ಶ್ವೇತ ಪತ್ರ ಹೊರಡಿಸಬೇಕು. ಖರ್ಚು ವೆಚ್ಚ ಸೇರಿ ಯೋಜನೆಗಳಿಗೆ ಎಷ್ಟು ಹಣ ಎಂಬುದರ ಬಗ್ಗೆ ಮಾಹಿತಿ ಕೊಡಬೇಕು. ಚಾಲ್ತಿಯಲ್ಲಿರುವ ಯೋಜನೆಗಳಿಗೆ ತಗಲುವ ವೆಚ್ಚದ ಬಗ್ಗೆ ತಿಳಿಸಬೇಕು. ರಾಜ್ಯದ ಜನ ಆರ್ಥಿಕ ವೆಚ್ಚದ ಒಂದು ನಿಲುವಿಗೆ ಬರಬೇಕಾಗಿದೆ. ಶ್ರೀಲಂಕಾ, ಪಾಕಿಸ್ತಾನದಂತಹ ಪರಿಸ್ಥಿತಿಗೆ ಕರ್ನಾಟಕ ಬರಬಾರದು ಎಂದು ಸಿ.ಟಿ. ರವಿ ಹೇಳಿದ್ದಾರೆ.