HomeKarnatakaರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆ; ಬೆಂಗಳೂರಿನಿಂದ 1294 ಮಂದಿ ಪ್ರಯಾಣ

ಒಡಿಶಾ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದ ನಂತರ ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಸಾವುನೋವುಗಳ ವರದಿಯಾಗಿದೆ.

ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಒಡಿಶಾ ಅಗ್ನಿಶಾಮಕ ಸೇವೆಗಳ ಮಹಾನಿರ್ದೇಶಕ ಸುಧಾಂಶು ಸಾರಂಗಿ, ರಕ್ಷಣಾ ತಂಡಗಳು 200 ಕ್ಕೂ ಹೆಚ್ಚು ಮೃತದೇಹಗಳನ್ನು ಪತ್ತೆಹಚ್ಚಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಅಪಘಾತ ಸಂಭವಿಸಿದ್ದು, ಬಾಲಸೋರ್ ಜಿಲ್ಲೆಯಲ್ಲಿ ಹಲವು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರ ವಿಳಂಬವಾಗಿದ್ದು, ಪ್ರಯಾಣಿಕರು ಪರದಾಟ ನಡೆಸಿದ್ದಾರೆ.

ಬೆಂಗಳೂರು ಬೈಯಪ್ಪನಹಳ್ಳಿ ನಿಲ್ದಾಣದಿಂದ 1,294 ಪ್ರಯಾಣಿಕರು ಅಪಘಾತಕೀಡಾದ ಯಶವಂತಪುರ -ಹೌರಾ ರೈಲಿನಲ್ಲಿ ತೆರಳುತ್ತಿದ್ದರು. ಯಶವಂತಪುರದಿಂದ ಪಶ್ಚಿಮ ಬಂಗಾಳದ ಹೌರಾಗೆ ರೈಲು ತೆರಳುವಾಗ 1,294 ಪ್ರಯಾಣಿಕರ ಬಗ್ಗೆ 994 ಮಂದಿ ಬುಕ್ ಮಾಡಿದ್ದರು.

ಬಹುನಾಗ ನಿಲ್ದಾಣದ ಬಳಿ ಮೂರು ರೈಲುಗಳು ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಸ್ಥಳಕ್ಕೆ ಇಂದು ಸಿಎಂ ನವೀನ್ ಪಟ್ನಾಯಕ್ ಭೇಟಿ ನೀಡಲಿದ್ದಾರೆ.

ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 207ಕ್ಕೆ ಏರಿಕೆಯಾಗಿದ್ದು, 900ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular