ಬೆಂಗಳೂರು: ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಹೊಂದಿದ ಫಲಾನುಭವಿಗಳಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುವುದು.
ಜೂನ್ ಪಡಿತರ ವಿಲೇವಾರಿ ಆಗಿರುವುದರಿಂದ ಜುಲೈನಲ್ಲಿ ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರದೇಶ ಸದಸ್ಯರಿಗೆ 10 ಕೆಜಿ ಆಹಾರಧಾನ್ಯ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರ ಪ್ರಕಟಿಸಿದ ಸಿಎಂ, ಚುನಾವಣೆ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಸದಸ್ಯರಿಗೆ 10 ಕೆಜಿ ಧಾನ್ಯ ನೀಡುವುದಾಗಿ ಹೇಳಿದ್ದು, ಅಂತೆಯೇ ಜುಲೈನಿಂದ 10 ಕೆಜಿ ಆಹಾರ ಧಾನ್ಯ ನೀಡಲಾಗುವುದು ಎಂದು ತಿಳಿಸಿದ್ದಾರೆ.
10 ಕೆಜಿ ಅಕ್ಕಿ ಬದಲಿಗೆ ಅಕ್ಕಿಯ ಜೊತೆಗೆ ಜೋಳ, ರಾಗಿ, ಗೋಧಿ ಸೇರಿಸಿ 10 ಕೆಜಿ ಆಹಾರ ಧಾನ್ಯ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.