HomeIndiaBig News: ಒಡಿಶಾ ರೈಲು ಅಪಘಾತ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ...

Big News: ಒಡಿಶಾ ರೈಲು ಅಪಘಾತ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ

ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ.

ಭೀಕರ ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಕೇಂದ್ರ ರೈಲ್ವೆ ಇಲಾಖೆ (Central Railway Department) ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಶಾಲಿಮಾರ್ & ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗಾ ರೈಲು ನಿಲ್ದಾಣ ಬಳಿ ಗೂಡ್ಸ್ ರೈಲಿಗೆ ಗುದ್ದಿದೆ. ಘಟನೆ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಸಂಕಟವಾಗಿದೆ.

ಈ ದುಃಖದ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ಹೇಳುತ್ತೇನೆ,.ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ (pm modi) ಟ್ವೀಟ್ ಮಾಡಿದ್ದಾರೆ. ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರಿಗೆ 2 ಲಕ್ಷ ರೂಪಾಯಿ ಸೇರಿ ಸಣ್ಣಪುಟ್ಟ ಗಾಯಗಳೊಂದಿಗೆ ನರಳುತ್ತಿರುವ ಇತರ ಪ್ರಯಾಣಿಕರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishanv) ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular