HomeIndiaBREAKING NEWS: ಒಡಿಶಾ ರೈಲು ದುರಂತ; ತುರ್ತು ಸಭೆ ಕರೆದ ಪ್ರಧಾನಿ ಮೋದಿ

BREAKING NEWS: ಒಡಿಶಾ ರೈಲು ದುರಂತ; ತುರ್ತು ಸಭೆ ಕರೆದ ಪ್ರಧಾನಿ ಮೋದಿ

ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ.

ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ ಎಂದು ಭಾರತ ಸರ್ಕಾರದ ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಮೋದಿ (Narendra Modi) ಅವರು ತುರ್ತು ಸಭೆ ಕರೆದಿದ್ದಾರೆ. ಪ್ರಧಾನಿ ಮೋದಿ ರೈಲ್ವೆ ಅಧಿಕಾರಿಗಳ ಜೊತೆ ಸಹ ಸಭೆ ಕರೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭೀಕರ ಅಪಘಾತದಲ್ಲಿ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಕೇಂದ್ರ ರೈಲ್ವೆ ಇಲಾಖೆ (Central Railway Department) ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ.

ಶಾಲಿಮಾರ್ & ಚೆನ್ನೈ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗಾ ರೈಲು ನಿಲ್ದಾಣ ಬಳಿ ಗೂಡ್ಸ್ ರೈಲಿಗೆ ಗುದ್ದಿದೆ. ಘಟನೆ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ಒಡಿಶಾದಲ್ಲಿ ಸಂಭವಿಸಿದ ರೈಲು ಅಪಘಾತದಿಂದ ಸಂಕಟವಾಗಿದೆ. ಈ ದುಃಖದ ಸಮಯದಲ್ಲಿ, ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ಹೇಳುತ್ತೇನೆ, ಗಾಯಾಳುಗಳು ಬೇಗ ಚೇತರಿಸಿಕೊಳ್ಳಲಿ ಎಂದು ಮೋದಿ (pm modi) ಟ್ವೀಟ್ ಮಾಡಿದ್ದಾರೆ.

ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರಿಗೆ 2 ಲಕ್ಷ ರೂಪಾಯಿ ಸೇರಿ ಸಣ್ಣಪುಟ್ಟ ಗಾಯಗಳೊಂದಿಗೆ ನರಳುತ್ತಿರುವ ಇತರ ಪ್ರಯಾಣಿಕರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (ashwini vaishanv) ಟ್ವೀಟ್ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular