ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರುಗಿದೆ.
ಒಡಿಶಾದ ರೈಲು ದುರಂತಕ್ಕೆ ಟೀಮ್ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ (virat kohli) ಕಳವಳ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಒಡಿಶಾದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ಕೇಳಿ ದುಃಖವಾಯಿತು. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ರೈಲು ಅಪಘಾತಕ್ಕೆ ಸಂಬಂಧಿಸಿದಂತೆ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ( pm modi) ಸಭೆ ಕರೆದಿದ್ದಾರೆ ಎಂದು ಭಾರತ ಸರ್ಕಾರದ ಮೂಲಗಳು ತಿಳಿಸಿವೆ. ಸಾವಿನ ಸಂಖ್ಯೆ ಏರುತ್ತಲೇ ಇದ್ದು, ಮೋದಿ (Narendra Modi) ಅವರು ತುರ್ತು ಸಭೆ ಕರೆದಿದ್ದಾರೆ. ಪ್ರಧಾನಿ ಮೋದಿ ರೈಲ್ವೆ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ.
https://twitter.com/imVkohli/status/1664862533818122240?ref_src=twsrc%5Etfw%7Ctwcamp%5Etweetembed%7Ctwterm%5E166