HomeIndiaಒಡಿಶಾ ಭೀಕರ ರೈಲು ದುರಂತಕ್ಕೆ ಸಂತಾಪ ಸೂಚಿಸಿದ ರಾಕಿಂಗ್ ಸ್ಟಾರ್ ‘ಯಶ್

ಒಡಿಶಾ ಭೀಕರ ರೈಲು ದುರಂತಕ್ಕೆ ಸಂತಾಪ ಸೂಚಿಸಿದ ರಾಕಿಂಗ್ ಸ್ಟಾರ್ ‘ಯಶ್

ಒಡಿಶಾದ ರೈಲು ದುರಂತದಲ್ಲಿ (railway accident) 207 ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದು, ದುರಂತಕ್ಕೆ ಇಡೀ ದೇಶವೇ ಕಂಬನಿ ಮಿಡಿದಿದೆ.

ಇದೀಗ ಘಟನೆ ಕುರಿತು ನಟ ರಾಕಿಂಗ್ ಸ್ಟಾರ್ ಯಶ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಒಡಿಶಾದ ರೈಲು ದುರಂತ ಎಷ್ಟು ಹೃದಯ ವಿದ್ರಾವಕವಾಗಿದೆ ಎಂಬುದನ್ನು ಪದಗಳಲ್ಲಿ ವಿವರಿಸುವುದು ಕಷ್ಟ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಕ್ಷಣಾ ಕಾರ್ಯಾಚರಣೆಗೆ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸಿದ ಜನರಿಗೆ ಕೃತಜ್ಞತೆಗಳು ಎಂದು ನಟ ಯಶ್ ಟ್ವೀಟ್ ಮಾಡಿದ್ದಾರೆ.
.
ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ. ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಆಗಮಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular