ಮಂಡ್ಯ: ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಮಲಾಪುರ ಬಳಿ ಸಂಭವಿಸಿದೆ.
ಹೇಮಂತ್, ನವೀನ್, ಶರತ್ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೋರ್ವ ಮೃತ ವ್ಯಕ್ತಿ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.