HomeIndiaರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಡಿಶಾ ಸರ್ಕಾರದಿಂದಲೂ ಪರಿಹಾರ ಘೋಷಣೆ

ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಡಿಶಾ ಸರ್ಕಾರದಿಂದಲೂ ಪರಿಹಾರ ಘೋಷಣೆ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಡಿಶಾ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಕೇಂದ್ರ ಸರ್ಕಾರ ನೀಡಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular