HomeKarnatakaBREAKING : ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮುಂದಿನ 3 ಗಂಟೆ ರಾಜ್ಯದಲ್ಲಿ ಭಾರೀ...

BREAKING : ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮುಂದಿನ 3 ಗಂಟೆ ರಾಜ್ಯದಲ್ಲಿ ಭಾರೀ ಮಳೆ…!

ಬೆಂಗಳೂರು : ಬೆಂಗಳೂರು (Bangalore) ಸೇರಿದಂತೆ ರಾಜ್ಯದಲ್ಲಿ ಮುಂದಿನ 3 ಗಂಟೆ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ (Meteorological Department) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಮುಂದಿನ 3 ಗಂಟೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣ ನಿರ್ಮಾಣ ಆಗಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ವಿಜಯನಗರ ಜಿಲ್ಲೆಗಳಲ್ಲೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular