ನವದೆಹಲಿ: ಒಡಿಶಾ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ತೆಗೆದುಕೊಳ್ಳಲು ಅದಾನಿ ಗ್ರೂಪ್ ನಿರ್ಧರಿಸಿದೆ ಎಂದು ಅಧ್ಯಕ್ಷ ಗೌತಮ್ ಅದಾನಿ ಭಾನುವಾರ ಹೇಳಿದ್ದಾರೆ.
ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಒಡಿಶಾ ರೈಲು ಅಪಘಾತದಿಂದ ನಾವೆಲ್ಲರೂ ತೀವ್ರ ದುಃಖಿತರಾಗಿದ್ದೇವೆ. ಈ ಅಪಘಾತದಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ಶಾಲಾ ಶಿಕ್ಷಣದ ಜವಾಬ್ದಾರಿಯನ್ನು ಅದಾನಿ ಗ್ರೂಪ್ ತೆಗೆದುಕೊಳ್ಳುತ್ತದೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಶಕ್ತಿಯನ್ನು ನೀಡುವುದು ಮತ್ತು ಮಕ್ಕಳಿಗೆ ಉತ್ತಮ ನಾಳೆಗಳನ್ನು ಒದಗಿಸುವುದು ನಮ್ಮೆಲ್ಲರ ಜಂಟಿ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
उड़ीसा की रेल दुर्घटना से हम सभी बेहद व्यथित हैं।
हमने फैसला लिया है कि जिन मासूमों ने इस हादसे में अपने अभिभावकों को खोया है उनकी स्कूली शिक्षा की जिम्मेदारी अडाणी समूह उठाएगा।
पीड़ितों एवं उनके परिजनों को संबल और बच्चों को बेहतर कल मिले यह हम सभी की संयुक्त जिम्मेदारी है।
— Gautam Adani (@gautam_adani) June 4, 2023

