ಬೆಂಗಳೂರು: ಫ್ರೀ ವಿದ್ಯುತ್ ಗೆ ಷರತ್ತು ಹೇರಿಕೆ ಮಾಡಿರುವುದನ್ನು ವಿರೋಧಿಸಿ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ.
200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಹೇಳಿದ್ದ ಕಾಂಗ್ರೆಸ್ ಪಕ್ಷ ಈಗ ಷರತ್ತು ವಿಧಿಸಿದ್ದು, ವಿದ್ಯುತ್ ಶುಲ್ಕ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಮತ್ತು ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸುವ ನಿರ್ಧಾರ ವಾಪಾಸ್ ಪಡೆಯುವಂತೆ ಒತ್ತಾಯಿಸಿ ಬಿಜೆಪಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದ್ದಾರೆ.
ಕಾಂಗ್ರೆಸ್ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಈಗ ಷರತ್ತು ವಿಧಿಸಿದೆ. ವಿದ್ಯುತ್ ಶುಲ್ಕವನ್ನು ಯೂನಿಟ್ ಗೆ 70 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ ಹಾಗೂ ಬಿಜೆಪಿ ಸರ್ಕಾರ ಹಾಲಿಗೆ ನೀಡುತ್ತಿದ್ದ ಪ್ರೋತ್ಸಾಹ ಧನವನ್ನು 1.5 ರೂ. ಕಡಿತ ಮಾಡಲಾಗಿದೆ ಈ ನಿರ್ಧಾರ ವಾಪಸ್ ಪಡೆಯಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ ಎಂದು ಹೇಳಿದ್ದಾರೆ.