alex Certify ಒಡಿಶಾದಲ್ಲಿ ಭೀಕರ ರೈಲು ದುರಂತ ಘಟನೆ; ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದಾಗಿ ಕ್ರಿಕೆಟಿಗ ಸೆಹ್ವಾಗ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಡಿಶಾದಲ್ಲಿ ಭೀಕರ ರೈಲು ದುರಂತ ಘಟನೆ; ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವುದಾಗಿ ಕ್ರಿಕೆಟಿಗ ಸೆಹ್ವಾಗ್ ಘೋಷಣೆ

ಒಡಿಶಾದ ಭೀಕರ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಶಿಕ್ಷಣದ ನೆರವು ನೀಡೋದಾಗಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ಘೋಷಿಸಿದ್ದಾರೆ. ಶುಕ್ರವಾರ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಮಕ್ಕಳಿಗೆ ಗುರುಗ್ರಾಮ್‌ನ ಸೆಹ್ವಾಗ್ ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “ಈ ಚಿತ್ರವು ನಮ್ಮನ್ನು ದೀರ್ಘಕಾಲ ಕಾಡುತ್ತದೆ. ಈ ದುಃಖದ ಸಮಯದಲ್ಲಿ, ದುರಂತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಮಕ್ಕಳ ಶಿಕ್ಷಣವನ್ನು ನೋಡಿಕೊಳ್ಳುವುದು ನಾನು ಮಾಡಬಹುದಾದ ಕನಿಷ್ಠ ಕೆಲಸವಾಗಿದೆ. ಅಂತಹ ಮಕ್ಕಳಿಗೆ ಸೆಹ್ವಾಗ್ ಇಂಟರ್ನ್ಯಾಷನಲ್ ಸ್ಕೂಲ್ ಬೋರ್ಡಿಂಗ್ ಸೌಲಭ್ಯದಲ್ಲಿ ನಾನು ಉಚಿತ ಶಿಕ್ಷಣವನ್ನು ನೀಡುತ್ತೇನೆ” ಎಂದು ಸೆಹ್ವಾಗ್ ಬರೆದಿದ್ದಾರೆ.

ಟ್ವಿಟರ್ ಬಳಕೆದಾರರು ಸಂಕಷ್ಟದ ಸಮಯದಲ್ಲಿ ಸೆಹ್ವಾಗ್ ಅವರ ನೆರವಿನ ಘೋಷಣೆಯನ್ನು ಶ್ಲಾಘಿಸಿದ್ದಾರೆ.
ದಶಕಗಳಲ್ಲಿ ದೇಶದ ಅತ್ಯಂತ ಭೀಕರ ರೈಲು ಅಪಘಾತದಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಉಚಿತ ಶಾಲಾ ಶಿಕ್ಷಣವನ್ನು ನೀಡುವುದಾಗಿ ಅದಾನಿ ಗ್ರೂಪ್ ಕೂಡ ಹೇಳಿದೆ.

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ನಡೆದ ರೈಲು ದುರಂತದಲ್ಲಿ 275 ಜನರು ಸಾವನ್ನಪ್ಪಿದ್ದರೆ, 1,175 ಮಂದಿ ಗಾಯಗೊಂಡಿದ್ದಾರೆ.

— Kumar Gaurav (@kg_it_is) June 4, 2023

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...