
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 11 ಗಂಟೆಗೆ ಡಿಸಿಎಂ ಶಾಸಕರ ಸಭೆ ನಿಗದಿ ಪಡಿಸಿದ್ದರು. ಸಭೆ ಕರೆದು 1 ಗಂಟೆ ಕಳೆದರೂ ಡಿಸಿಎಂ ಸಮಯಕ್ಕೆ ಸರಿಯಾಗಿ ಸಭೆಗೆ ಬಾರದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಬಿಜೆಪಿ ಶಾಸಕರು ಸಭೆ ಬಹಿಷ್ಕರಿಸಿದ್ದಾರೆ.
ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ, ಮುನಿರತ್ನ, ರವಿ ಸುಬ್ರಹ್ಮಣ್ಯ ಸೇರಿದಂತೆ ಹಲವು ಶಾಸಕರು ಸಭೆಯಿಂದ ಹೊರ ನಡೆದಿದ್ದಾರೆ.

