HomeKarnatakaBIG NEWS: ಪಶುಸಂಗೋಪನಾ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

BIG NEWS: ಪಶುಸಂಗೋಪನಾ ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಗೊಹತ್ಯೆ ನಿಷೇಧ ಕಾಯ್ದೆ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗೋಹತ್ಯೆ ನಿಷೇಧ ಕಾಯ್ದೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದಿದ್ದಾರೆ.

ಇದೇ ವೇಳೆ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿಕೆ ವಿಚಾರವಾಗಿ ಮಾತನಾಡಿದ ಸಿಎಂ, 1964ರ ಕಾಯ್ದೆಯಂತೆ 12 ವರ್ಷ ಮೇಲ್ಪಟ್ಟ ರಾಸುಗಳ ವಧೆ ಮಾಡಿ ಎಂದಿದೆ. ಕೃಷಿ ಕೆಲಸಕ್ಕೆ ಉಪಯೋಗಕ್ಕೆ ಬಾರದ, ಅನುಪಯುಕ್ತ ರಾಸುಗಳ ವಧೆಗೆ ಅವಕಾಶವಿದೆ ಎಂದಿದೆ ಎಂದು ನಮ್ಮ ಸಚಿವರು ಹೇಳಬೇಕಿತ್ತು. ಆದರೆ ನಮ್ಮ ಸಚಿವರು ಹಾಗೇ ಹೇಳಿದ್ದಾರೆ ಎಂದು ಹೇಳುವ ಮೂಲಕ ಸಚಿವ ವೆಂಕಟೇಶ್ ನೀಡಿದ್ದ ಎಮ್ಮೆ, ಕೋಣಗಳನ್ನು ಕಡಿಯುವುದಾದರೆ ಹಸುವನ್ನು ಯಾಕೆ ಕಡಿಯಬಾರದು ಎಂಬ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular