ವೈವಾಹಿಕ ಜೀವನಕ್ಕೆ ಕಾಲಿಟ್ಟ ‘ಅಂಬಿ’ ಪುತ್ರನಿಗೆ ಕಿಚ್ಚ ಸುದೀಪ್ ರಿಂದ ದುಬಾರಿ ಗಿಫ್ಟ್

ನಟ ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ (Abhishek Ambarish) ತನ್ನ ಬಹುಕಾಲದ ಗೆಳತಿ ಅವಿವಾ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಅಂಬಿ ಪುತ್ರನ ಮದುವೆ ಸಮಾರಂಭಕ್ಕೆ ಹಿರಿಯ ಸಿನಿ ಗಣ್ಯರು, ಸ್ಯಾಂಡಲ್ ವುಡ್ ನಟ, ನಟಿಯರು ಆಗಮಿಸಿ ಶುಭ ಹಾರೈಸಿದರು. ನಟ ಕಿಚ್ಚ ಸುದೀಪ್ (Sudeep) ಕೂಡ ಅಂಬಿ ಪುತ್ರನ ಮದುವೆಗೆ ಆಗಮಿಸಿ ನೂತನ ಜೋಡಿಗೆ ಶುಭ ಹಾರೈಸಿದರು.

ಮದುವೆಗೆ ಉಡುಗೊರೆಯಾಗಿ ನಟ ಸುದೀಪ್ ಚಿನ್ನದ ಸರ ನೀಡಿದ್ದು, ಅಭಿಷೇಕ್ ಕೊರಳಿಗೆ ಚಿನ್ನದ ಸರ ಹಾಕಿ ಪ್ರೀತಿಯಿಂದ ತಬ್ಬಿ ಅಭಿಗೆ ಸುದೀಪ್ ಶುಭ ಹಾರೈಸಿದ್ದಾರೆ.

ಒಕ್ಕಲಿಗ ಸಂಪ್ರದಾಯದಂತೆ (Okkaliga tradition) ಇಂದು ಬೆಳಗ್ಗೆ 9.30 ರಿಂದ 10.30ರ ವರೆ ಈ ಶುಭ ಮುಹೂರ್ತದಲ್ಲಿ ಅವಿವಾಗೆ ಅಭಿಷೇಕ್ ತಾಳಿ ಕಟ್ಟಿದ್ದಾರೆ. ಜೂನ್ 16ಕ್ಕೆ ಮಂಡ್ಯದ ಮದ್ದೂರಿನ ಗೆಜ್ಜಲಗೆರೆ ಗ್ರಾಮದಲ್ಲಿ ಬೀಗರ ಔತಣ ಕೂಟ ಏರ್ಪಡಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read