HomeKarnatakaBIG NEWS: ವಿದ್ಯುತ್ ದರ ಹೆಚ್ಚಳ ನಿರ್ಧಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಕಿಡಿ

BIG NEWS: ವಿದ್ಯುತ್ ದರ ಹೆಚ್ಚಳ ನಿರ್ಧಾರಕ್ಕೆ ಮಾಜಿ ಸಿಎಂ ಬೊಮ್ಮಾಯಿ ಕಿಡಿ

ಬೆಳಗಾವಿ: ಉಚಿತ ವಿದ್ಯುತ್ ಭರವಸೆ ನೀಡಿ ವಿದ್ಯುತ್ ದರ ಏರಿಕೆಗೆ ನಿರ್ಧರಿಸಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಈ ಹಿಂದೆಯೂ ಕಾಂಗ್ರೆಸ್ ನವರು ಹೆಸ್ಕಾಂ ಮೇಲೆ ಹೊರೆ ಹೇರಿದ್ದರು. ಒಟ್ಟು ಬಿಲ್ ನಲ್ಲಿ 50% ನಷ್ಟು ಬಿಲ್ ಸರ್ಕಾರದಿಂದ ಬರುತ್ತೆ. ಹಳೆ ಬಾಕಿ ಎಂದು ಪುಕ್ಕಟೆ ಬಿಲ್ ನ್ನು ಜನರ ಮೇಲೆ ಹಾಕಿದ್ದರು. ಈಗ ಉಚಿತ ವಿದ್ಯುತ್ ಎಂದು ದರ ಹೆಚ್ಚಳಕ್ಕೆ ಮುಂದಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡುತ್ತಿದೆ. ಎಷ್ಟು ಯೂನಿಟ್ ವಿದ್ಯುತ್ ಬಳಕೆ ಮಾಡಬೇಕು ಎಂಬ ಅಧಿಕಾರ ಪ್ರತಿ ಪ್ರಜೆಗೂ ಇದೆ. ಕಾಂಗ್ರೆಸ್ ನವರು ಸರಾಸರಿ ಲೆಕ್ಕದಲ್ಲಿ ಗ್ರಾಹಕರು ಬಳಸುವ ವಿದ್ಯುತ್ ಮೇಲೂ ಹಿಡಿತ ಸಾಧಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular