HomeKarnatakaBIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

BIG NEWS: ಅಧಿಕಾರಿಗಳ ಅಮಾನತಿಗೆ ಡಿಸಿಎಂ ಆದೇಶ

ಬೆಂಗಳೂರು: ಬೆಂಗಳೂರಿನ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಹಾಗೂ ಯೋಜನೆ ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಇಂತಹ ಯೋಜನೆ ರೂಪಿಸಿದ ಅಧಿಕಾರಿಗಳನ್ನು ಇಂದು ಸಂಜೆಯೊಳಗೆ ಸೇವೆಯಿಂದ ಅಮಾನತು ಮಾಡುವಂತೆ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ನಿರ್ದೇಶನ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಯೋಜನೆ ಕೊಟ್ಟವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಅಧಿಕಾರಿಗಳ ಸಭೆಯಲ್ಲಿ ಡಿಸಿಎಂ ಪ್ರಶ್ನಿಸಿದ್ದಾರೆ.

ಉತ್ತರ ನೀಡಲು ಅಧಿಕಾರಿಗಳು ತಡಬಡಾಯಿಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular