HomeLatest NewsBIG NEWS: ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ಸಾಕ್ಷಿ ಮಲಿಕ್ ಸ್ಪಷ್ಟನೆ

BIG NEWS: ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ; ಸಾಕ್ಷಿ ಮಲಿಕ್ ಸ್ಪಷ್ಟನೆ

ನವದೆಹಲಿ: ಯಾವ ರಾಜಿಯನ್ನೂ ಮಾಡಿಕೊಂಡಿಲ್ಲ, ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲ ಎಂದು ಕುಸ್ತಿಪಟು ಸಾಕ್ಷಿ ಮಲಿಕ್ ಹಾಗೂ ಅವರ ಪತಿ ಸತ್ಯವರ್ತ್ ಕಡಿಯಾನ್ ಸ್ಪಷ್ಟಪಡಿಸಿದ್ದಾರೆ.

ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಸಭೆ ಬಳಿಕ ಪ್ರತಿಭಟನೆಯಿಂದ ಹಿಂದೆ ಸರಿದು ರೈಲ್ವೆ ಇಲಾಖೆಯ ತಮ್ಮ ಕೆಲಸಕ್ಕೆ ಮರಳಿದ್ದಾರೆ ಎಂಬ ವರದಿ ಪ್ರಸಾರವಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಸಾಕ್ಷಿ ಮಲಿಕ್, ನಮ್ಮ ಹೋರಾಟ ಮುಂದುವರೆಯುತ್ತದೆ. ಯಾವುದೇ ರಾಜಿ ಪ್ರಶ್ನೆ ಇಲ್ಲ. ನ್ಯಾಯಕ್ಕಾಗಿ ಒಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಹೇಳಿದ್ದಾರೆ.

ಸತ್ಯಾಗ್ರಹದ ಜೊತೆಗೆ ರೈಲ್ವೆ ಇಲಾಖೆಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular