ಕಲಬುರ್ಗಿ ನಗರದ ಅಜಾದ್ ಪುರ ರಸ್ತೆಯಲ್ಲಿ 23 ವರ್ಷದ ಯುವಕನನ್ನು ಮಾರಕಾಸ್ತ್ರದಿಂದ ಥಳಿಸಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಉಮೆರ್ ಹತ್ಯೆಯಾದ ಯುವಕ ಎಂದು ಹೇಳಲಾಗಿದೆ. ಉಮೇರ್ ನಿಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳೀಯರು ಉಮೇರ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.