BIG NEWS: ಶಾಸಕಿ ನಿಂದನೆ ಆರೋಪ; 8 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ರಾಯಚೂರು: ರಾಯಚೂರು ಜಿಲ್ಲೆ ದೇವದುರ್ಗ ಶಾಸಕಿ ಕರಿಯಮ್ಮ ನಾಯಕ್ ಅವರನ್ನು ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ 8 ಜನ ಬಿಜೆಪಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅರಕೇರಾ ತಾಲೂಕಿನ ಆಲದಮರ ತಾಂಡಾದಲ್ಲಿ ಜೂನ್ 4 ರಂದು ವಿದ್ಯುತ್ ತಂತಿ ತಗುಲಿ ಲೈನ್ ಮ್ಯಾನ್ ವಿರೂಪಾಕ್ಷಪ್ಪ ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಶಾಸಕಿ ಕರಿಯಮ್ಮ ನಾಯಕ್ ತಡವಾಗಿ ಆಗಮಿಸಿದ್ದರು. ಈ ವೇಳೆ ಶಾಸಕಿ ಕರಿಯಮ್ಮ ನಾಯಕ್ ಅವರನ್ನು ಬಿಜೆಪಿ ಕಾರ್ಯಕರ್ತರು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ದೇವದುರ್ಗ ಠಾಣೆಯಲ್ಲಿ ಬಿಜೆಪಿಯ 8 ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read