HomeKarnatakaBIG NEWS: 3 ಲಾರಿಗಳ ನಡುವೆ ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

BIG NEWS: 3 ಲಾರಿಗಳ ನಡುವೆ ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ದುರ್ಮರಣ

ಬಾಗಲಕೋಟೆ: ಮೂರು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ತುಳಸಿಗೇರಿ ಬಸ್ ನಿಲ್ದಾಣದ ಬಳಿ ನಡೆದಿದೆ.

ದಶರಥ ಜೋಗಿನ (52) ಮೃತ ದುರ್ದೈವಿ. ರಸ್ತೆಬದಿ ನಿಲ್ಲಿಸಿದ್ದ ಲಾರಿಗೆ ಒಂದರ ಹಿಂದೊಂದರಂತೆ ಮೂರು ಲಾರಿಗಳು ಡಿಕ್ಕಿ ಹೊಡೆದಿವೆ. ಈ ವೇಳೆ ಅದೇ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ದಶರಥ ಜೋಗಿನ ಮೇಲೆಯೇ ಲಾರಿ ಹರೊದು ಹೋಗಿದೆ. ವ್ಯಕ್ತಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಲಾರಿಗಳು ಗದ್ದನಕೇರಿ ಕ್ರಾಸ್ ನಿಂದ ಲೋಕಾಪುರ ಕಡೆಗೆ ಹೊರಟಿದ್ದವು. ಕಲಾದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular