HomeKarnatakaBIG NEWS: ಯಾವ ಪ್ರಾಣಿ ಹತ್ಯೆಯನ್ನೂ ನಾನು ಸಹಿಸಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

BIG NEWS: ಯಾವ ಪ್ರಾಣಿ ಹತ್ಯೆಯನ್ನೂ ನಾನು ಸಹಿಸಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಗೋಹತ್ಯೆ ನಿಷೇಧ ಮಾತ್ರವಲ್ಲ ಯಾವ ಪ್ರಾಣಿಯ ಹತ್ಯೆಯನ್ನೂ ನಾನು ಸಹಿಸಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಹಿಳೆಯಾಗಿ ಹೇಳುತ್ತಿದ್ದೇನೆ ಗೋಹತ್ಯೆ ನಿಷೇಧ ಅಷ್ಟೇ ಅಲ್ಲ ಯಾವುದೇ ಪ್ರಾಣಿ ಹತ್ಯೆ ಮಾಡಬಾರದು. ಯಾವ ಪ್ರಾಣಿಗಳ ಹತ್ಯೆಯನ್ನು ನಾನು ಸಹಿಸುವುದಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಕಾಂಗ್ರೆಸ್ ಜನರಿಗೆ ನೀಡಿರುವ ಐದು ಗ್ಯಾರಂಟಿ ಭಾರವಸೆಗಳನ್ನು ಈಡೇರಿಸಲಿದೆ. ಇದರಲ್ಲಿ ಯಾವುದೇ ಸಂಶಯ ಬೇಡ ಗೃಹ ಲಕ್ಷ್ಮೀ, ಗೃಹ ಜ್ಯೋತಿ ಸೇರಿದಂತೆ ನಾವು ನೀಡಿದ ಭರವಸೆಗಳನ್ನು ಈಡೇರಿಸುತ್ತೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಬಾಡಿಗೆದಾರರು ಗೃಹ ಜ್ಯೋತಿ ಯೋಜನೆಯಿಂದ ವಂಚಿತರಾಗಲ್ಲ, ಯಾವುದೇ ವದಂತಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular