ಬೆಂಗಳೂರು : ಬಾಡಿಗೆದಾರರಿಗೂ 200 ಯೂನಿಟ್ ಉಚಿತ ವಿದ್ಯುತ್ (Free electricity)ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಇಂಧನ ಸಚಿವ ಕೆಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.
ಉಚಿತ ವಿದ್ಯುತ್ ಗೆ ಅರ್ಜಿ ಸಲ್ಲಿಸುವ ಬಾಡಿಗೆದಾರರು ತಮ್ಮ ಈ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಎಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದಾರೆಂದು ದಾಖಲೆ ಇರಬೇಕು. ಮನೆ ಮಾಲೀಕ ಕಡ್ಡಾಯವಾಗಿ ಆಸ್ತಿ ತೆರಿಗೆ ಪಾವತಿಸಿರಬೇಕು. ವಿದ್ಯುತ್ ಬಿಲ್ (Electricity bill), ಮನೆ ಬಾಡಿಗೆ ಕರಾರುಪತ್ರ ಇರಬೇಕು. ಎಷ್ಟು ಬಾಡಿಗೆ ಮನೆಗಳಿವೆ ಎಂದು ಮಾಲೀಕ ಘೋಷಿಸಿರುವ ದಾಖಲೆಗಳಿರಬೇಕು ಎಂದು ಇಂಧನ ಸಚಿವ ಕೆ ಜೆ ಜಾರ್ಜ್ ಮಾಹಿತಿ ನೀಡಿದ್ದಾರೆ.
ಒಂದು ವೇಳೆ ಬಾಡಿಗೆದಾರರು ಕಳ್ಳಾಟ ಮಾಡಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ (action) ಕೈಗೊಳ್ಳಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.