alex Certify ಜುಲೈ 7ರಂದು ಬಜೆಟ್ ಮಂಡನೆ; ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜುಲೈ 7ರಂದು ಬಜೆಟ್ ಮಂಡನೆ; ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು: ಜುಲೈ 7ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಪೂರ್ವ ಸಿದ್ಧತೆ ನಡೆಸಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಹತ್ವದ ಚರ್ಚೆ ನಡೆಸಿದ್ದಾರೆ.

ಪ್ರಮುಖವಾಗಿ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಶಕ್ತಿ ಭವನದಲ್ಲಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಸಭೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಹಾಗೂ ವಿವಿಧ ಯೋಜನೆಗಳಿಗೆ ಖರ್ಚು ವೆಚ್ಚ, ಆರ್ಥಿಕ ಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಜುಲೈ 3ರಿಂದ ನೂತನ ಸರ್ಕಾರದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜುಲೈ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...