ಬೆಳಗಾವಿ : ಅಭಿವೃದ್ಧಿ ದೃಷ್ಟಿಯಲ್ಲಿ ಬೆಳಗಾವಿ ಜಿಲ್ಲೆ (Belagavi District)ಯ ವಿಭಜನೆಯಾಗಬೇಕು. ಎಲ್ಲ ನಾಯಕರ ಸಹಮತ ಪಡೆದು ಬೆಳಗಾವಿ ಜಿಲ್ಲೆ ವಿಭಜನೆ ಆಗಲಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Laxmi Hebbalkar) ಹೇಳಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ಬೆಳಗಾವಿ ಜಿಲ್ಲೆ ವಿಭಜನೆಯಾಗಬೇಕು ಎಲ್ಲಾ ನಾಯಕರ ಸಹಮತ ಪಡೆದು ವಿಭಜನೆಯಾಗಲಿ, ಜಿಲ್ಲಾ ವಿಭಜನೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಲಿ, ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
ಬಾಡಿಗೆದಾರರಿಗೆ ಉಚಿತ ವಿದ್ಯುತ್ ಸಿಗಲ್ಲ ಎಂದು ವದಂತಿ ಹಬ್ಬಿಸಲಾಗುತ್ತಿದೆ. ಜನರು ವದಂತಿಗಳಿಗೆ ಕಿವಿಗೊಡಬೇಡಿ, ಬಾಡಿಗೆದಾರರು ಸೇರಿ ಎಲ್ಲರಿಗೂ 200 ಯೂನಿಟ್ ಫ್ರೀ ವಿದ್ಯುತ್ ಕೊಡುತ್ತೇವೆ ಎಂದು ಹೇಳಿದ್ದಾರೆ.