HomeKarnatakaBIG NEWS: ಗೃಹಲಕ್ಷ್ಮೀ ಯೋಜನೆ; ಜೂನ್ 15ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

BIG NEWS: ಗೃಹಲಕ್ಷ್ಮೀ ಯೋಜನೆ; ಜೂನ್ 15ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಳಗಾವಿ; ನಾವು ನೀಡಿದ ಭರವಸೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ. ಯಾವುದೇ ಅಂತೆಕಂತೆಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭವಾಗುತ್ತಿದೆ. ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ಅನುಮಾನ ಬೇಡ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನು ಖಂಡಿತವಾಗಿ ಈಡೇರಿಸುತ್ತೇವೆ. ಬಿಜೆಪಿ ನಾಯಕರ ಪ್ರತಿಭಟನೆಗಳಿಗೆ ನಾನು ಉತ್ತರ ಕೊಡುವುದಿಲ್ಲ. ಈಗಾಗಲೇ ಜನರು ಅವರಿಗೆ ಉತ್ತರ ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿಯವರು ಎಷ್ಟು ಭರವಸೆ ಕೊಟ್ಟಿದ್ದರು, ಎಷ್ಟು ಈಡೇರಿಸಿದ್ದಾರೆ ಎಂಬುದು ಜನರಿಗೂ ಗೊತ್ತಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular